Sunday, June 8, 2025

ಉಡುಪಿಯಲ್ಲಿ ಇದುವರೆಗೆ ಟೊಮೇಟೊ ಫ್ಲೂ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಜಿಲ್ಲೆಯಲ್ಲಿ ಇದುವರೆಗೆ ಟೊಮೇಟೊ ಫ್ಲೂ ಪತ್ತೆಯಾಗಿಲ್ಲ. ಮಕ್ಕಳ ಪೋಷಕರು ಅನಗತ್ಯವಾಗಿ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತದೆ. ಟೊಮೆಟೊ ಫ್ಲೂಗೆ ಹೋಲುವ ಒಂದು ಪ್ರಕರಣ ಮೂರು ತಿಂಗಳ ಹಿಂದೆ ಪತ್ತೆಯಾಗಿತ್ತು. ಫೂಟ್ ಆ್ಯಂಡ್ ಹ್ಯಾಂಡ್ ಲಕ್ಷಣವಿರುವ ಪ್ರಕರಣ ಅದಾಗಿತ್ತು. ಈ ಕುರಿತು ಆರೋಗ್ಯ ಇಲಾಖೆಗೆ ವರದಿ ಮಾಡಿದ್ದೇವೆವು. ಟೊಮೇಟೋ ಫ್ಲೂಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚಿಗೆ ಹೊಸ ಪ್ರಕರಣ ಪತ್ತೆಯಾಗಿರುವ ಕುರಿತು ಮಾಹಿತಿ ಸಂಗ್ರಹಿಸುತ್ತೇವೆ. ಕೇರಳದಲ್ಲಿ ಪ್ರಕರಣಗಳು ಪತ್ತೆಯಾದ ಬಳಿಕ ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಲಾಗಿದೆ. ಟೊಮೆಟೊ ಫ್ಲೂ ಹೋಲುವ ಜ್ವರ ಪತ್ತೆಯಾದರೂ ತಿಳಿಸಲು ಹೇಳಿದ್ದೇವೆ. ಆದರೆ ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಮಕ್ಕಳಲ್ಲಿ ವಿವಿಧ ರೀತಿಯ ಜ್ವರಗಳು ಕಾಣಿಸಿಕೊಳ್ಳುತ್ತದೆ. ಈ ಬಗ್ಗೆ ಪೋಷಕರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles