ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ನಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಂಕರ್ ಪಾಲನ್ ವಿಜಯ ಪತಾಕೆಯನ್ನು ಹಾರಿಸಿದ್ದಾರೆ.
ಅಲೆವೂರು ಗ್ರಾಮ ಪಂಚಾಯತ್ ನ ಸದಸ್ಯ ಕೊರಂಗ್ರಪಾಡಿ ಪ್ರವೀಣ್ ಶೆಟ್ಟಿ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಉಪಚುನಾವಣೆಯಲ್ಲಿ 67 ಮತಗಳಿಂದ ಶಂಕರ್ ಪಾಲನ್ ಗೆಲುವು ಸಾಧಿಸಿದ್ದಾರೆ.
ಶುಕ್ರವಾರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿ.ಪ್ರವೀಣ್ ಶೆಟ್ಟಿಯವರ ಸಹೋದರ ಪ್ರಸಾದ್ ಶೆಟ್ಟಿ ಮತ್ತು ಬಿಜೆಪಿ ಅಭ್ಯರ್ಥಿ ಶಂಕರ್ ಪಾಲನ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಭಾನುವಾರ ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಮತ ಏಣಿಕೆಯಲ್ಲಿ ಶಂಕರ್ ಪಾಲನ್ ೪೦೦ ಮತ ಪಡೆಯುವ ಮೂಲಕ ಗೆಲುವನ್ನು ಸಾಧಿಸಿದ್ದಾರೆ.
ಅಲೆವೂರು ಉಪಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಶಂಕರ್ ಪಾಲನ್
Subscribe
Login
0 Comments