Monday, June 9, 2025

ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದ ಆರೋಪಿ ಪರಾರಿ

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಆರೋಪಿಯೋರ್ವ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಇಂದು ಬೆಳಗ್ಗೆ ವಿದ್ಯಾನಗರದಲ್ಲಿ ನಡೆದಿದೆ.
ಪರಾರಿಯಾದ ಆರೋಪಿಯನ್ನು ಆಲಂಪಾಡಿಯ ಆಮಿರಲಿ ಎಂದು ಗುರುತಿಸಲಾಗಿದೆ. ಈತನನ್ನು ಕಣ್ಣೂರು ಸೆಂಟ್ರಲ್ ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರುತ್ತಿದ್ದಾಗ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಮಿರಲಿ ವಿದ್ಯಾನಗರ ಜಂಕ್ಷನ್ ಬಳಿ ತಪ್ಪಿಸಿ ಪರಾರಿಯಾಗಿದ್ದಾನೆ. ಈತ ೨೦ಕ್ಕೂ ಅಧಿಕ ಪ್ರಕರಣಗಳಿಗೆ ಸಂಬAಧಿಸಿದ ಆರೋಪಿಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles