ಕುಂದಾಪುರ: ಕಳೆದೆರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕುಂದಾಪುರದ ಉಪ್ಪಿನಕುದ್ರುವಿನ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ಮೃತ ಯುವತಿಯನ್ನು ಕುಂದಾಪುರದ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ (25) ಎಂದು ಗುರುತಿಸಲಾಗಿದೆ. ಬಟ್ಟೆಯಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈ ಯುವತಿ ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಆಕೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಯುವತಿ ಆತ್ಮಹತ್ಯೆಗೆ ಅಜೀಝ್ (32), ಸಲ್ಮಾ ಅಜೀಜ್ ಕಾರಣ ಎಂದು ಕುಟುಂಬಿಕರು ಆರೋಪಿಸಿದ್ದು, ಲವ್ ಜಿಹಾದ್ ಮಾಡಲಾಗಿದೆ ಎಂದು ಹಿಂದೂ ಸಂಘಟನೆ ಆರೋಪ ಮಾಡುತ್ತಿದೆ. ಯುವತಿಯನ್ನು ಪುಸಲಾಯಿಸಿ ಆಕೆ ಜೀವನ ಹಾಳು ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದಿಸಲಾಗಿದೆ ಎಂದು ಯುವತಿಯ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.