Monday, June 9, 2025

ಕುಂದಾಪುರದ ಖಾಸಗಿ ಆಸ್ಪತ್ರೆಯ ಮಾಲೀಕ ಗುಂಡುಹಾರಿಸಿಕೊಂಡು ಸೂಸೈಡ್..!

ಕುಂದಾಪುರ: ಚಿನ್ಮಯಿ ಖಾಸಗಿ ಆಸ್ಪತ್ರೆಯ ಮಾಲೀಕ ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರದಲ್ಲಿ ಗುರುವಾರ ನಡೆದಿದೆ.

ಮೃತರನ್ನು ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ(80) ಎಂದು ಗುರುತಿಸಲಾಗಿದೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಹಣಕಾಸಿನ ವ್ಯವಹಾರವೇ ಇದಕ್ಕೆ ಕಾರಣ ಎನ್ನಲಾಗಿದೆ.

ಕಟ್ಟೆ ಭೋಜಣ್ಣ ಅವರು ಕೋಟ್ಯಾಧಿಪತಿಯಾಗಿದ್ದು, ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದ್ದರು. ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles