ಬಂಟ್ವಾಳ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ಪಾದಚಾರಿ ಕೂಲಿ ಕಾರ್ಮಿಕ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಸಮೀಪ ತಲಪಾಡಿ ಬಳಿ ನಡೆದಿದೆ.
ಮೃತರನ್ನು ಕೇರಳ ಮೂಲದ ರಾಜಮ್ಮ (60) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ರಾಜಮ್ಮ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಕರಣ ಸಂಬAಧ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾದ ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಕೂಲಿ ಕಾರ್ಮಿಕ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ:ಮಹಿಳೆ ಸ್ಥಳದಲ್ಲೇ ಸಾವು
Subscribe
Login
0 Comments