Monday, June 9, 2025

ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ ಬಜ್ಪೆ ಪೊಲೀಸರು..!

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಆರೋಪಿಯೋರ್ವನನ್ನು ಮಂಗಳೂರು ನಗರದ ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ.
ಬಂಧಿತ ಆರೋಪಿಯನ್ನು ಮಳವೂರು ಗ್ರಾಮದ ಕರಂಬಾರು ನಿವಾಸಿ ಗೋಪಾಲಕೃಷ್ಣ ಅಲಿಯಾಸ್ ಗೋಪಾಲ್( 45) ಎಂದು ಗುರುತಿಸಲಾಗಿದೆ. ಈತ ಸಂಚರಿಸುತ್ತಿದ್ದ ದ್ವಿಚಕ್ರ ವಾಹನದ ಸೀಟಿನ ಅಡಿಭಾಗದಲ್ಲಿ ಬಚ್ಚಿಟ್ಟಿದ್ದ ಸುಮಾರು 7,500 ಮೌಲ್ಯದ ಎಂಒಎಂಎ (ಶ್ರೀನೈಟ್) ಮಾದಕ ವಸ್ತು ಜೊತೆಗೆ 50 ಸಾವಿರ ರೂ. ಮೌಲ್ಯದ ಸ್ಕೂಟರ್, ಸಣ್ಣ ತೂಕದ ತಕ್ಕಡಿಯನ್ನು ವಶಕ್ಕೆ ಪಡೆಯಲಾಗಿದೆ.
ಬಜ್ಪೆ ಪೊಲೀಸರು ಕರಂಬಾರು ಬಳಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಆರೋಪಿ ಗೋಪಾಲಕೃಷ್ಣನಿಗೆ ವಾಹನ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಈ ವೇಳೆ ಆತ ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾನೆ. ಬಳಿಕ ಬೆನ್ನಟ್ಟಿದ ಪೊಲೀಸರು ಆತನನ್ನು ದಸ್ತಗಿರಿ ಮಾಡಿ ಸ್ಕೂಟರ್ ಅನ್ನು ತಪಾಸಣೆಗೆ ಒಳಪಡಿಸಿದಾಗ ಅದರಲ್ಲಿ ಮಾದಕ ವಸ್ತು ಇರುವುದು ಪತ್ತೆಯಾಗಿದೆ. ಬಳಿಕ ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಆತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಮೇಲೆ ಈ ಹಿಂದೆ ಮಂಗಳೂರು ಗ್ರಾಮಾಂತರ, ಕಾವೂರು, ಪುತ್ತೂರು ಠಾಣೆಗಳಲ್ಲಿ 4 ಗಾಂಜಾ ಮಾರಾಟ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣಗಳು ದಾಖಗಿರುವುದು ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles