Sunday, June 8, 2025

ಎಸ್‌ಡಿಪಿಐ ಬಾವುಟವುಳ್ಳ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕರಿಂದ ಪೊಲೀಸರ ನಿಂದನೆ:ವಿಡಿಯೋ ವೈರಲ್

ಸುಳ್ಯ:ಎಸ್‌ಡಿಪಿಐ ಬಾವುಟ ಹಾಕಿಕೊಂಡು ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕರಿಬ್ಬರು ಪೊಲೀಸ್ ನಿಂದನೆ ಮಾಡಿರುವ ವೀಡಿಯೊವೊಂದು ವೈರಲ್ ಆಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ನಗರದ ಹೊರವಲಯದಲ್ಲಿರುವ ಕಣ್ಣೂರಿನಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ನಡೆದಿತ್ತು. ಈ ಸಮಾವೇಶಕ್ಕೆ ತೆರಳುತ್ತಿದ್ದ ಸಂದರ್ಭ ಪೊಲೀಸ್ ನಿಂದನೆ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಇದರ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊದಲಿಗೆ ಆರ್‌ಎಸ್‌ಎಸ್ ಅನ್ನು ನಿಂದನೆ ಮಾಡಿದ ಈ ಕಿಡಿಗೇಡಿ ಯುವಕರು ಆ ಬಳಿಕ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರ ವೀಡಿಯೋ ವೈರಲ್ ಆಗುತ್ತಿದ್ದು, ಕಾನೂನು ರಕ್ಷಣೆ ಮಾಡುವ ಪೊಲೀಸರನ್ನು ನಿಂದನೆ ಮಾಡಿರುವ ಯುವಕರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles