Saturday, June 7, 2025

ಚಿನ್ನಾಭರಣ ಬೆಲೆಯಲ್ಲಿ ಇಂದು ದಿಢೀರ್ ಏರಿಕೆ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು (ಏ.26, ಬುಧವಾರ) ಭಾರಿ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಚಿನ್ನಾಭರಣಗಳ ದರಗಳು ಸ್ವಲ್ಪ ತಗ್ಗಿದ್ದವು. ಚಿನ್ನಾಭರಣಗಳನ್ನು ಖರೀದಿಸುವ ಮುನ್ನ ಬೆಲೆಗಳನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಹೆಚ್ಚಿದ ನಂತರ 55,900 ರೂಪಾಯಿಗೆ ಬಂದು ನಿಂತಿದೆ. ನಿನ್ನೆ 55,700 ರೂಪಾಯಿ ಇತ್ತು. ಒಂದು ಕೆಜಿ ಬೆಳ್ಳಿ ಬೆಲೆ ಇಂದು 80,700 ರೂಪಾಯಿ ಇದೆ.

ಬೆಳ್ಳಿ ಬೆಲೆಯಲ್ಲಿ ಇವತ್ತು 700 ರೂಪಾಯಿ ಏರಿಕೆಯಾಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು: ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 220 ರೂಪಾಯಿ ಏರಿಕೆಯಾದ ನಂತರ 60,930 ರೂಪಾಯಿ ಇದೆ. ನಿನ್ನೆ 60,710 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್ ಚಿನ್ನದ ದರದಲ್ಲಿ 200 ರೂಪಾಯಿ ಹೆಚ್ಚಳದ ನಂತರ 55,850 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಈ ಬೆಲೆ ನಿನ್ನೆ 55,650 ರೂಪಾಯಿ ಇತ್ತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles