ಮುಂಬೈ: 2023ರ ಐಪಿಎಲ್ ಆವೃತ್ತಿಯಲ್ಲಿ ಪ್ಲೇ ಆಫ್ ಹಾದಿ ಕಠಿಣವಾಗಿಸಿಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಈಗ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಂಡಿರಜ್ಜು ಗಾಯಕ್ಕೆ ತುತ್ತಾಗಿರುವ ಕಾರಣ ತಂಡದ ಸ್ಟಾರ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.
ಈ ಬಗ್ಗೆ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಹೈದರಾಬಾದ್ ತಂಡ ಮಂಡಿರಜ್ಜು ಗಾಯದಿಂದಾಗಿ ವಾಷಿಂಗ್ಟನ್ ಸುಂದರ್ ಅವರು 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ ಎಂದು ತಿಳಿಸಿದೆ. ಜೊತೆಗೆ ಆದಷ್ಟು ಬೇಗ ಗುಣಮುಖರಾಗಿ ವಾಷಿ ಎಂದು ಹಾರೈಸಿದೆ.