Tuesday, June 24, 2025

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗುಸಹಿತಉತ್ತಮ ಮಳೆಯಾಗಲಿದೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಎಚ್ಎಎಲ್‌ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles