Saturday, June 7, 2025

ಬೆಂಗಳೂರಲ್ಲಿ ಮೇ 13ರಂದು ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆ ಮುನ್ನೆಚ್ಚರಿಕೆ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮತ ಎಣಿಕೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮೇ 13ರಂದು ಸ್ಫೋಟಕ ವಸ್ತುಗಳ ಸಾಗಾಟ, ಪಟಾಕಿ ಸಿಡಿಸುವುದು, ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದು, ಭಿತ್ತಿಪತ್ರ ಪ್ರದರ್ಶನ ಕೂಡ ನಿಷೇಧಿಸಲಾಗಿದೆ.

ಶನಿವಾರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು ಐದು ಜನರಿಗಿಂತ ಹೆಚ್ಚು ಜನರು ಗುಂಪು ಸೇರದಂತೆ ಸೂಚನೆ ನೀಡಿದ್ದಾರೆ. ಇನ್ನು ಶವಸಂಸ್ಕಾರ, ಮದುವೆ ಬಿಟ್ಟು ಉಳಿದೆಲ್ಲದಕ್ಕೂ ನಿಷೇಧಾಜ್ಞೆ ಅನ್ವಯವಾಗಲಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles