Wednesday, June 18, 2025

ಮೈಮೇಲೆ ಬಿದ್ದ ಮರದ ಕೊಂಬೆ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಯುವಕ

ಕಡಬ: ಯುವಕನ ಮೇಲೆ ಬೃಹತ್ ಗಾತ್ರದ ಮರದ ಕೊಂಬೆಯೊಂದು ಮುರಿದು ಬಿದ್ದಿದ್ದು, ಅದೃಷ್ಟವಶಾತ್ ಯುವಕ ಪ್ರಾಣಪಾಯದಿಂದ ಪಾರಾದ ಘಟನೆ ಕಡಬದ ಮುಖ್ಯಪೇಟೆಯಲ್ಲಿ ನಡೆದಿದೆ.
ಪ್ರಾಣಾಪಾಯದಿಂದ ಪಾರಾದ ಯುವಕನನ್ನು ಸುನಿಲ್ ಎಂದು ಗುರುತಿಸಲಾಗಿದೆ. ಕಡಬದ ಸ್ವಸ್ತಿಕ್ ಪೈಪ್ ಅಂಗಡಿಯ ಮುಂಭಾಗದಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂಬದಿಗೆ ಬರಲು ಸೈಡ್ ಹೇಳುತ್ತಿದ್ದ ವೇಳೆಯಲ್ಲಿ ಅಲ್ಲೇ ಪಕ್ಕದಲ್ಲಿದ್ದ ಮರದಿಂದ ಒಣಗಿದ ಕೊಂಬೆಯೊಂದು ಮುರಿದು ಸುನಿಲ್ ಮೇಲೆ ಬಿದ್ದಿದೆ. ಕೊಂಬೆ ಬಿದ್ದ ತಕ್ಷಣ ಸಣ್ಣಪ್ರಮಾಣದಲ್ಲಿ ಗಾಯಗೊಂಡ ಸುನಿಲ್ ಅವರನ್ನು ಸ್ಥಳೀಯರು ಉಪಚರಿಸಿ, ನಂತರದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಈ ದೃಶ್ಯಾವಳಿಗಳು ಸ್ಥಳೀಯ ಸಿಸಿ ಟಿವಿಯೊಂದರಲ್ಲಿ ಸೆರೆಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles