Sunday, June 8, 2025

ವಗ್ಗ ವಲಯ ಮಟ್ಟ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ತಾಲೂಕು ಇದರ ವತಿಯಿಂದ ವಗ್ಗ ವಲಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ಸಹಕಾರದಲ್ಲಿ ವಗ್ಗ ವಲಯ ಮಟ್ಟ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶವು ಪೂಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

ಈ ಸಂದರ್ಭ ವಲಯದ ನಿರ್ಗಮಿತ ಅಧ್ಯಕ್ಷ ಸುಂದರ ಪೂಜಾರಿ, ನೂತನ ಅಧ್ಯಕ್ಷ ಚಿದಾನಂದ ರೈ ಕಕ್ಯ,
ಮಾಜಿ ಸಚಿವ ಬಿ.ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ , ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಹೆಚ್.ಮಂಜುನಾಥ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್.ಬಿ.ನಾಯಕ್, ಮಾಜಿ ಜಿ.ಪಂ. ಸದಸ್ಯರಾದ ತುಂಗಪ್ಪ ಬಂಗೇರ, ಪದ್ಮಶೇಖರ ಜೈನ್, ಎಸ್‌ಬಿಐ ಡೆಪ್ಯೂಟಿ ಜನರಲ್ ಮ್ಯಾನೆಜರ್ ರಾಜೇಶ್ ಗುಪ್ತ, ಗ್ರಾ.ಪಂ. ಅಧ್ಯಕ್ಷೆ ಹರ್ಷಿನಿ, ವಗ್ಗ ವಲಯ ಜನ ಜಾಗೃತಿ ವೇದಿಕೆ ಹರಿಂದ್ರ ಪೈ, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಎ.ಸಿ.ಭಂಡಾರಿ ಮತ್ತಿತರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles