ಜೈಪುರ: ರಾಜಸ್ಥಾನದ ಹಳ್ಳಿಯೊಂದರಲ್ಲಿ ವಾಯುಪಡೆಯ MIG-21 ಯುದ್ಧ ವಿಮಾನ ಮನೆಗೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ಸೂರತ್ಗಢ ವಾಯುನೆಲೆಯಿಂದ ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪೈಲಟ್ ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.