Saturday, June 7, 2025

ಕೊಹ್ಲಿ – ಗಂಭೀರ್‌ ಮಧ್ಯೆ‌ ಮತ್ತೆ ಮಾತಿನ ಚಕಮಕಿ

ಲಖನೌ : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಲಖನೌ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮೆಂಟರ್ ಗೌತಮ್ ಗಂಭೀರ್ ನಡುವೆ ಸೋಮವಾರ ಮಾತಿನ ಚಕಮಕಿ ನಡೆದಿದೆ. ಪಂದ್ಯ‌ ಮುಗಿದ‌ ನಂತರ ಈ ವಿದ್ಯಮಾನ ನಡೆದಿದೆ.

ಇವರಿಬ್ಬರ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳಗಳು ನಡೆದಿವೆ. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕೊಹ್ಲಿ ಮತ್ತು ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿರುವುದು ಕಂಡುಬಂದಿದೆ. ಗೌತಮ್ ಗಂಭೀರ್ ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ. ಕೊಹ್ಲಿ ಮತ್ತು ಗಂಭೀರ್ ನಡುವಿನ ಜಗಳ ಮಿತಿಮೀರುವ ಮುನ್ನ ಇತರ ಆಟಗಾರರು ಮತ್ತು ತರಬೇತುದಾರರು ಮಧ್ಯೆ ಪ್ರವೇಶಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಲಖನೌ ಸೂಪರ್ ಜೈಂಟ್ಸ್ ಅನ್ನು 18 ರನ್‌ಗಳಿಂದ ಸೋಲಿಸಿದ ನಂತರ ಈ ಜಗಳ ಆರಂಭವಾಯಿತು.

ಈ ವೇಳೆ ಎರಡೂ ತಂಡಗಳ ಆಟಗಾರರು ಮಧ್ಯಪ್ರವೇಶಿಸಿ ಇಬ್ಬರನ್ನು ದೂರ ಕರೆತಂದರು. ಕೆಲ ವರ್ಷಗಳ ಹಿಂದೆ ಗಂಭೀರ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕ್ಯಾಪ್ಟನ್‌ ಆಗಿದ್ದರು. ಅಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ವಿಕೆಟ್‌ ಪತನವಾದಾಗ ಗಂಭೀರ್‌ ಅತಿಯಾಗಿ ಸಂಭ್ರಮಿಸಿದ್ದರು. ಬಳಿಕ ಇಬ್ಬರ ನಡುವೆ ಮೈದಾನದಲ್ಲಿಯೇ ಜಗಳ ನಡೆದಿತ್ತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles