Saturday, June 7, 2025

ರೈತರಿಗೆ ಬಿದಿರು ಕೃಷಿ ಮಾಡಲು ಸಹಾಯಧಕ್ಕೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಪರಿಶಿಷ್ಟ ವರ್ಗದ ಜಮೀನು ಹೊಂದಿರುವ ರೈತರಿಗೆ ಬಿದಿರು ಕೃಷಿ ಮಾಡಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಪ್ರತೀ ಎಕರೆಗೆ ಪ್ರತಿ ವರ್ಷ 18000 ರೂ. ನಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ  ಯೋಜನಾ ಸಮನ್ವಯಾಧಿಕಾರಿ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles