ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜು ಪ್ರವೇಶ ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿ ವಿಚಾರಣೆ ಬುಧವಾರ ನಡೆಸಿದ ಹೈಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ ವಿರೋಧದ ವಾದ ವಿವಾದವನ್ನು ಆಲಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ವಿಭಾಗೀಯ ಪೀಠಕ್ಕೆ ವರ್ಗಾವಣೆ ಮಾಡಿದೆ. ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನು ವಿಭಾಗೀಯ ಪೀಠವೇ ನೀಡಲಿ ಎಂದು ಹೇಳಿದೆ.