ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ನವರು ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಿದೆ. ಕ.ರಾ.ಮು.ವಿ ಕುಲಸಚಿವರ ಕಚೇರಿಯಿಂದ ತರಬೇತಿ ಪಡೆಯಲು ಆಸಕ್ತಿ ಇರುವವರು ಜನವರಿ 14 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ದೂ.ಸಂಖ್ಯೆ: 0821-2515944 ಗೆ ಕರೆಮಾಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.