Saturday, June 7, 2025

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಶಿಕಾರಿಪುರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಒಟ್ಟು 20 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 68 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳು ಖಾಲಿ ಇವೆ. ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

www.anganwadirecruit.kar.nic.in ವೆಬ್‍ಸೈಟ್ ನಲ್ಲಿ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದು. ಜನವರಿ 13 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಫೆಬ್ರವರಿ 13 ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles