ಮಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಬಜರಂಗದಳ ಮುಖಂಡನ ಹತ್ಯೆ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೋಮವಾರ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ನಗರದ ಎಲ್ಲ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಆಗುವ ಎಲ್ಲಾ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಬಳ್ಳಾಲ್ ಬಾಗ್ ವೃತ್ತ, ಎಂ.ಜಿ ರಸ್ತೆ, ಕೆ.ಎಸ್.ರಾವ್ ರೋಡ್, ಹಂಪನಕಟ್ಟೆ ಪ್ರದೇಶದಲ್ಲಿ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಹಾಗೂ ಡಿಸಿಪಿಗಳ ನೇತೃತ್ವದಲ್ಲಿ ರೂಟ್ ಮಾರ್ಚ್ ಮಾಡಲಾಯಿತು.

