ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ ಮಂಗಳೂರು ನಗರದ ತುಳು ಭವನದಲ್ಲಿ ಮಂಗಳವಾರ ಭಕ್ತಿ ಭಂಡಾರಿ, ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಶ್ರದ್ದಾ – ಭಕ್ತಿಯಿಂದ ಆಚರಿಸಲಾಯಿತು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಗಿರಿ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ಕೆ.ಎಸ್.ಜಯಪ್ಪ, ಸಂಘದ ಪದಾಧಿಕಾರಿಗಳು ಮಹಾತ್ಮ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ, ಗೌರವ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ. ಜಿ. ರಾಜೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.