ಬೆಳ್ಮಣ್: ಬ್ರೇಕ್ ಫೇಲ್ನಿಂದಾಗಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಬೋಳ ಪದವಿನಿಂದ ಬೋರ್ವೆಲ್ ಕೊರೆಯುವ ವಾಹನದ ಸಗಟುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯು ಬ್ರೇಕ್ ಫೇಲ್ನಿಂದ ಇಳಿಜಾರು ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಚಾಲಕ ಮತ್ತು ಕ್ಲೀನರ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.