ಬೆಂಗಳೂರು: ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ರಾಜ್ಯದಲ್ಲಿ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ, ವೈದ್ಯರಿಗೆ, ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮತ್ತಿತರ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಬಿಗಿ ಭದ್ರತಾ ಕ್ರಮ ಕೈಗೊಳ್ಳಬಹುದು. ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಆದ್ದರಿಂದ ಜನರು ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ. ಕೋವಿಡ್ 3 ನೇ ಅಲೆ ಎದುರಿಸಲು ಮುಂದಿನ 2ತಿಂಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಶೇಖರಿಸಿಡಲಾಗಿದೆ ಎಂದರು.