ನವದೆಹಲಿ: ಇಂದಿನಿಂದ ದೇಶಾದ್ಯಂತ ಬೂಸ್ಟರ್ ಡೊಸ್ ನೀಡಲಾಗುತ್ತಿದ್ದು, ಆರೋಗ್ಯ ಸಿಬ್ಬಂದಿ, ಕೋವಿಡ್ ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ವೃದ್ದರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ.
ಕೋವಿನ್ ವೆಬ್ ಸೈಟ್ ನಲ್ಲಿ ಹಿಂದಿನ ಶುಕ್ರವಾರದಿಂದಲೇ ನೋಂದಣಿಯು ಪ್ರಾರಂಭವಾಗಿದೆ. ಇಂದಿನಿಂದ ಬೂಸ್ಟರ್ ಡೋಸ್ ಲಸಿಕೆ ನೀಡಿಕೆಗೆ ಚಾಲನೆ ಸಿಗಲಿದೆ. ತಜ್ಞರ ಪ್ರಕಾರ ಕೊವಿಡ್ ನ ರೂಪಾಂತರಿ ಒಮಿಕ್ರಾನ್ ತಡೆಗಟ್ಟಲು ಬೂಸ್ಟರ್ ಡೋಸ್ ನೀಡುವುದು ಲಾಭದಾಯಕವಾದುದು. ಆದ್ದರಿಂದ ದೇಶಾದ್ಯಂತ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಇಂದಿನಿಂದ ರಾಜ್ಯದಲ್ಲೂ ಬೂಸ್ಟರ್ ಡೋಸ್ ನೀಡಲಾಗುತ್ತದೆ.
ಬೆಂಗಳೂರಿನ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ಈ ಲಸಿಕಾಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ.
ಬೂಸ್ಟರ್ ಡೋಸ್ ಪಡೆಯಲು ಕೋವಿನ್ ಪೋರ್ಟಲ್ ನಲ್ಲಿ ನೋಂದಾಯಿಸಿದಂತೆ ಈಗಾಗಲೇ ಎರಡು ಡೋಸ್ ಪಡೆದಿರಬೇಕು. ಹಾಗೂ ಎರಡನೇ ಡೋಸ್ ಪಡೆದು 9 ತಿಂಗಳು ಆಗಿರಬೇಕು. ಈ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು. ನೀವು ಈಗಾಗಲೇ ಯಾವ ಲಸಿಕೆ ಪಡೆದಿರುತ್ತಿರೋ ಅದನ್ನೇ ಬೂಸ್ಟರ್ ಡೊಸ್ ಆಗಿ ಪಡೆಯಬೇಕು. ಅಂದರೆ ಕೋವಿಶೀಲ್ಡ್ ಲಸಿಕೆ ಪಡೆದವರು ಕೋವಿಶೀಲ್ಡ್ ಅನ್ನೇ, ಕೋವ್ಯಾಕ್ಸಿನ್ ಪಡೆದವರು ಕೋವ್ಯಾಕ್ಸಿನ್ ಅನ್ನೇ ಪಡೆಯಬೇಕು.
ಬೂಸ್ಟರ್ ಡೊಸ್ ಅನ್ನು ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಗೆ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತದೆ.