ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯವಾದ ಘಟನೆ ಹೆಬ್ರಿಯ ಎಸ್.ಆರ್ ಶಾಲೆಯ ಕಿನ್ನಿಗುಡ್ಡೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಶಿವಮೊಗ್ಗದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಮಿನಿ ಬಸ್ಸಿನ ಸ್ಟೇರಿಂಗ್ ಎಂಡ್ ಕಟ್ಟಾದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಬ್ರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಕ್ಕೆ ಬಸ್ ಡಿಕ್ಕಿ; ಪ್ರಯಾಣಿಕರಿಗೆ ಗಾಯ
Subscribe
Login
0 Comments