Sunday, June 8, 2025

ಇಂದು ದೆಹಲಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎರಡು ದಿನಗಳ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆ ಸೋಮವಾರ ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ದಿಲ್ಲಿಯಲ್ಲಿ ಉನ್ನತ ನಾಯಕರ ಭೇಟಿಗೆ ಅವಕಾಶ ಕೇಳಲಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಅವಕಾಶ ಕೇಳಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ತಿಂಗಳು ರಾಜ್ಯ ಬಜೆಟ್‌ ಇರುವ ಕಾರಣ ಹಲವಾರು ಯೋಜನೆಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಲಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಾಗುತ್ತದೆ. ಜೊತೆಗೆ ಅಂತರಾಜ್ಯ ಜಲವಿವಾದವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೂ ಚರ್ಚೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles