Sunday, June 8, 2025

ಸಿಎಂ ಇಬ್ರಾಹಿಂ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ..!

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ, ಎಂಎಲ್‌ಸಿ ಸಿಎಂ ಇಬ್ರಾಹಿಂ ಅವರು ತಮ್ಮ ಕಾಂಗ್ರೆಸ್ ಪಕ್ಷದ ಸದಸ್ಯ ಸ್ಥಾನಕ್ಕೆ ಹಾಗೂ ಎಂಎಲ್‌ಸಿ ಸ್ಥಾನಕ್ಕೆ ಶನಿವಾರ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಇಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಪತ್ರದಲ್ಲಿ ನಾನು ಕಳೆದ 12 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಸಿದ್ದರೆ ನಾನೇ 13 ಸದಸ್ಯರ ಬೆಂಬಲದಿಂದ ಗೆಲ್ಲುತ್ತಿದ್ದೆ ಎಂದು ತಿಳಿಸಿದ್ದಾರೆ.

ಚುನಾವಣೆ ಮಾಡದೇ ನನಗಿಂತ ಕಿರಿಯವರಾದ ಬಿ.ಕೆ.ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿರುವುದು ನನಗೆ ಬೇಸರವಾಗಿದೆ. ಈ ಕುರಿತು ನಾನು ಕೇಳಿದ ಪ್ರಶ್ನೆಗೆ ಸರಿಯಾದ ಉತ್ತರವೂ ನೀಡಿಲ್ಲ. ಈ ಎಲ್ಲಾ ಕಾರಣಗಳಿಂದ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಸೋನಿಯಾ ಗಾಂಧಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles