Sunday, June 8, 2025

ಜಿಲ್ಲೆಯಲ್ಲಿ ನೇಕಾರರಿಗೆ ಕೌಶಲ್ಯ ತರಬೇತಿ ಆರಂಭ

ಉಡುಪಿ: ಇಂದು ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಅವರು ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ ಮಾತನಾಡಿದರು.

ಜವಳಿ ಇಂಜಿನಿಯರ್‌ಗಳು ಮತ್ತು ಜವಳಿ ಪರಿಣಿತರ ತಂಡವನ್ನು ನೇಕಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ ನೇಕಾರಿಕೆಯಲ್ಲಿ ಲಾಭವನ್ನು ಪಡೆಯಲು ಜಿಲ್ಲೆಗೆ ಕಳುಹಿಸಲಾಗಿದೆ. ಅವರ ವರದಿಯ ಮೇರೆಗೆ ನೇಕಾರಿಕೆಯನ್ನು ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ ಕಾರ್ಕಳದಲ್ಲಿ ಜವಳಿ ಪಾರ್ಕ್ ನಲ್ಲಿ ವೃತ್ತಿಪರ ನೇಕಾರರಿಗೆ ಕೌಶಲ್ಯ ತರಬೇತಿ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೂ ಸಹ ಈ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು ಎಂದು ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಅವರು ಹೇಳಿದರು.

ನೇಕಾರ ಸಮ್ಮಾನ ಯೋಜನೆಯಡಿ ಈಗಾಗಲೇ ಮೊತ್ತವನ್ನು ಪಾವತಿಸಲಾಗಿದ್ದು, 122 ಕೋಟಿ ರೂ. ಗಳ ಸಬ್ಸಿಡಿಯನ್ನು ನೀಡಲಾಗಿದೆ. ರಾಜ್ಯದಲ್ಲಿ ನೇಕಾರರನ್ನು ಕೃಷಿಕರೆಂದು ಪರಿಗಣಿಸಿ ಅವರ ಅಭಿವೃದ್ಧಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಹಾಗೂ ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ, ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಬಡ್ಡಿ ಸಹಾಯಧನ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಕೈಮಗ್ಗಗಳನ್ನು ಪುನಃಶ್ಚೇತನಗೊಳಿಸಬೇಕು, ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಯುವಜನತೆ ನೇಕಾರಿಕೆಯೆಡೆಗೆ ಆಕರ್ಷಿತರಾಗುವಂತೆ ಹಾಗೂ ನೇಕಾರಿಕೆಯು ಲಾಭದಾಯಕವಾಗುವಂತೆ ಮಾಡಬೇಕು. ಹಾಗೂ ಕೈಮಗ್ಗದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ನೇಕಾರರು ಸಚಿವರಲ್ಲಿ 12% ರಿಂದ 5% ಗೆ ಕೈಮಗ್ಗ ಉತ್ಪನ್ನಗಳಿಗೆ ವಿಧಿಸಲಾಗಿರುವ ಜಿ.ಎಸ್.ಟಿ ದರವನ್ನು ಇಳಿಕೆ ಮಾಡಬೇಕು. ನೇಕಾರರಿಗೆ ನೀಡುವ ಮಜೂರಿ ಮೇಲೆ 10% ಇನ್ಸೆಂಟಿವ್ ಹಾಗೂ ಪ್ರೋತ್ಸಾಹಧನ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಪರ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಅಶೋಕ್,  ದ.ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ಶಿವಶಂಕರ್, ನೇಕಾರರ ಸಂಘದ ಅಧ್ಯಕ್ಷ ಅಬ್ನೆಸರ್ ಸತ್ಯಾರ್ಥಿ, ಶಿವಳ್ಳಿ ನೇಕಾರರ ಸಂಘದ ಶಶಿಕಾಂತ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಉಡುಪಿ ನೇಕಾರರ ಸಂಘದ ವ್ಯವಸ್ಥಾಪಕ ನಿರ್ದೇಶಕ ಸದಾನಂದ ಕಾಂಚನ್ ಅವರು ಸ್ವಾಗತಿಸಿ, ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles