Saturday, June 7, 2025

ರಾಜ್ಯದಲ್ಲಿ ಇಂದು 707 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಸತತ ಎರಡನೇ ದಿನವೂ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. 707 ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ ದಾಖಲಾಗಿದ್ದು, 30,065,05ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು 3 ಮಂದಿ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,327ಕ್ಕೆ ಏರಿಕೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 565 ಮಂದಿಗೆ ಕೊರೋನಾ ಪಾಸಿಟಿವ್ ಸೋಂಕು ದೃಢಪಟ್ಟಿದೆ. 12,62,962ಕ್ಕೆ ನಗರದಲ್ಲಿನ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ 252 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 8223 ಕ್ಕೆ ಏರಿಕೆಯಾಗಿದೆ. ಹಾಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,926ಕ್ಕೆ ಏರಿಕೆಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles