Sunday, June 8, 2025

ಜಿಲ್ಲೆಯಾದ್ಯಂತ ಕಡ್ಡಾಯವಾಗಿ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು: ಜಿಲ್ಲಾಧಿಕಾರಿ ಕೂರ್ಮರಾವ್ ಎಂ.

ಉಡುಪಿ: ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆಯನ್ನು ನಡೆಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ತಪ್ಪಿಸುವುದಕ್ಕಾಗಿ ಪ್ರತಿಯೊಬ್ಬರೂ 2 ಡೋಸ್ ಲಸಿಕೆ ಪಡೆಯಬೇಕು. ಹಾಗೂ ಜಿಲ್ಲೆಯಾದ್ಯಂತ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದರು.
ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು, ನಿಯಮ ಉಲ್ಲಂಘಿಸಿದಲ್ಲಿ ಸೂಕ್ತ ದಂಢ ವಿಧಿಸಬೇಕು. ಜಿಲ್ಲಾ ಟಾಸ್ಕ್ ಪೋರ್ಸ್, ತಾಲೂಕು ಟಾಸ್ಕ್ ಪೂರ್ಸ್, ಗ್ರಾಮೀಣ ಟಾಸ್ಕ್ ಪೋರ್ಸ್ ತಂಡಗಳು, ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಈ ಕುರಿತು ಪರಿಶೀಲನೆ ನಡೆಸಬೇಕು. ಸದಸ್ಯರುಗಳು ವಾರದಲ್ಲಿ ನಿಯಮಿತವಾಗಿ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚಿರ್ಚಿಸಿ ಅವುಗಳನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕೋವಿಡ್ – 19 ಕುರಿತ ಸಾರ್ವಜನಿಕರ ದೂರುಗಳ ನಿವಾರಣೆ ಮಾಡಲು 24*7 ಕಾರ್ಯರ್ನಿಹಿಸುವ ಸಹಾಯವಾಣಿ ಕೇಂದ್ರಗಳನ್ನು ತೆರೆಯಬೇಕು. ತಾಲೂಕು ಮಟ್ಟದಲ್ಲಿ ಕೋವಿಡ್ ಸಂಪರ್ಕಿತರನ್ನು ಪತ್ತೆ ಹಚ್ಚಲು ತಂಡಗಳನ್ನು ರಚಿಸುವ ಜೊತೆಗೆ ನೋಢೆಲ್ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಹಾಗೂ ಆರೋಗ್ಯ ಇಲಾಖೆಯ ಮತ್ತು ವಿವಿಧ ಕಾರ್ಯಪಡೆ ತಂಡಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles