ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 8,425 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹಾಗೂ 47 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು 3,822 ಜನರಲ್ಲಿ ಪ್ರಕರಣ ಪತ್ತೆಯಾಗಿದ್ದು, 17 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 97,781 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ 40,000 ಸಕ್ರಿಯ ಪ್ರಕರಣಗಳಿವೆ. ಇಂದು 19,800 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟರ್ ಮೂಲಕ ತಿಳಿಸಿದ್ದಾರೆ.