ನವದೆಹಲಿ: ಇತ್ತೀಚೆಗೆ ದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2,09,918ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 4,13,02,440ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 959ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಆ ಮೂಲಕ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 4,95,050ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24ಗಂಟೆಗಳಲ್ಲಿ 2,62,628ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 3,89,76,122ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 17,59,434ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೆ 72,57,74,705ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.