Friday, June 27, 2025

ದೇಶದ ಆರು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದೆ

ನವದೆಹಲಿ: ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. 90,000 ಹೊಸ ಪ್ರಕರಣಗಳು ಗುರುವಾರದಂದು ದಾಖಲಾಗಿದೆ. ದೇಶದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ನವದೆಹಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ಈ ಆರು ರಾಜ್ಯಗಳಲ್ಲಿ ಹಿಂದಿನ ವಾರದಿಂದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ.

ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,179 ದಿಂದ 70,005ಕ್ಕೆ, ಪಶ್ಚಿಮ ಬಂಗಾಳದಲ್ಲಿ 7,457 ಇಂದ 25,475ಕ್ಕೆ, ದೆಹಲಿಯಲ್ಲಿ 1,612 ಇಂದ 14,889ಕ್ಕೆ, ಕರ್ನಾಟಕದಲ್ಲಿ 7,485 ರಿಂದ 13,561 ಮತ್ತು ತಮಿಳುನಾಡಿನಲ್ಲಿ 6,537 ಇಂದ 12,412ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ 90,928 ಹೊಸ ಸಕ್ರಿಯ ಪ್ರಕರಣಗಳು ದಾಖಲಾಗಿದೆ. ಇದರಿಂದ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,85,401 ಆಗಿದೆ.

ಇನ್ನು ದೇಶದಲ್ಲಿ ಕೋವಿಡ್ ನ ರೂಪಾಂತರಿ ಓಮಿಕ್ರಾನ್ ಸಕ್ರಿಯ ಪ್ರಕರಣಗಳ ಸಂಖ್ಯೆ 2630 ಆಗಿದೆ. 995 ಜನ ಓಮಿಕ್ರಾನ್ ಗೆ ತುತ್ತಾದವರು ಡಿಸ್ಚಾರ್ಜ್ ಆಗಿದ್ದು, ಈ ವರೆಗೂ ದೇಶದ 26 ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest


0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles