Saturday, June 7, 2025

ಸಿಎಂ ಸೇರಿ ನಾಲ್ವರು ಸಂಪುಟ ಸಚಿವರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಹಿಂದಿನ ಎರಡು ಅಲೆಗಳಿಗಿಂತ ಮೂರನೇ ಅಲೆಯ ತೀವ್ರತೆ ಅಧಿಕವಾಗಿದೆ. ಇನ್ನು ಈ ಮೂರನೇ ಅಲೆಯಲ್ಲಿ ಅನೇಕ ಗಣ್ಯರು, ಸೆಲೆಬ್ರಿಟಿಗಳು, ರಾಜಕೀಯ ನಾಯಕರು, ಸಚಿವರುಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಿನ್ನೆ ಕೋವಿಡ್-19 ದೃಢಪಟ್ಟಿತ್ತು. ಇಂದು ಸಚಿವ ಜೆ ಸಿ ಮಾಧುಸ್ವಾಮಿಗೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹಾಗೂ ಮಾಜಿ ಸಚಿವ ಎಚ್ ಎಮ್ ರೇವಣ್ಣ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸಚಿವ ಸಂಪುಟದ ಸಚಿವರುಗಳಾದ ಆರ್ ಅಶೋಕ್ ಹಾಗೂ ಬಿ ಸಿ ನಾಗೇಶ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರ ಸಂಪರ್ಕಕ್ಕೆ ಬಂದ ಸಚಿವರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಇಂದು ಅಪರಾಹ್ನ ತುರ್ತು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles