Sunday, June 22, 2025

ಓಟಿಟಿಯಲ್ಲಿ ‘ಗರುಡಗಮನ ವೃಷಭ ವಾಹನ’ ಚಿತ್ರದ ಬಿಡುಗಡೆ ಡೇಟ್ ಫಿಕ್ಸ್

ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘ಗರುಡಗಮನ ವೃಷಭ ವಾಹನ’ ಚಿತ್ರವು ನವೆಂಬರ್ 19ರಂದು ಬಿಡುಗಡೆಗೊಂಡಿತ್ತು. ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ರಾಜ್ ಬಿ ಶೆಟ್ಟಿ ಈ ಸಿನಿಮಾದಲ್ಲಿ ಫುಲ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಚಿತ್ರತಂಡವು ಇತ್ತೀಚೆಗೆ ‘ಗರುಡಗಮನ ವೃಷಭ ವಾಹನ’ ಚಿತ್ರದ ಓಟಿಟಿ ಹಕ್ಕುಗಳನ್ನು ಜೀ5 ಸಂಸ್ಥೆ ಪಡೆದುಕೊಂಡಿದೆ ಎಂಬುದನ್ನು ತಿಳಿಸಿತ್ತು. ಇದೀಗ ಈ ಚಿತ್ರವು ಜನವರಿ 15ರಂದು ಜೀ5 ನಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ಮಾಹಿತಿಯನ್ನು ನೀಡಿದೆ. ರಿಷಬ್ ಶೆಟ್ಟಿ ಅವರು ಈ ಕುರಿತ ಮಾಹಿತಿಯಿರುವ ಟ್ವೀಟ್​ಗಳನ್ನು ರೀಟ್ವೀಟ್ ಮಾಡುವ ಮೂಲಕ ಓಟಿಟಿಯಲ್ಲಿ ಚಿತ್ರ ಬಿಡುಗಡೆಯ ದಿನಾಂಕವನ್ನು ಖಚಿತಪಡಿಸಿದ್ದಾರೆ. ಇನ್ನು ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ, ರಿಷಬ್​ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ ಮೊದಲಾದವರು ನಟಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest


0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles