ನವದೆಹಲಿ: ಭಾರತದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ ಗಣನೀಯ ಇಳಿಕೆ ಕಂಡಿದೆ. ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 83,876 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 895ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 5,02,905 ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,99,054ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,06,60,202ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಸದ್ಯ 11,08,938 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ ಶೇ.7.25ರಷ್ಟಿದೆ.