Saturday, June 7, 2025

ಭಾರತದಲ್ಲಿ ಇಳಿಕೆಯತ್ತ ಕೊರೊನಾ: ಕಳೆದ 24 ಗಂಟೆಗಳಲ್ಲಿ 3.37 ಲಕ್ಷ ಪ್ರಕರಣ ಪತ್ತೆ, 488 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ನ ಹಾವಳಿಯಿಂದ ಬೇಸತ್ತಿರುವ ಜನರು ಇದೀಗ ಸ್ವಲ್ಪ ನಿಟ್ಟುಸಿರು ಬಿಡಬಹುದಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಳಿತವನ್ನು ಕಾಣುತ್ತಿದ್ದು, ಶುಕ್ರವಾರದ ಕೊರೊನಾ ಪ್ರಕರಣಗಳಿಗೆ ಹೋಲಿಸಿದರೆ ಶನಿವಾರ ಕಡಿಮೆ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,37,704 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 3,89,03,731 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.


ದೇಶದಲ್ಲಿ ಒಂದೇ ದಿನ 488 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಸೋಂಕಿನಿಂದಾಗಿ ಸಾವಿಗೀಡಾದವರ ಸಂಖ್ಯೆ 4,88,911 ಕ್ಕೆ ಏರಿಕೆಯಾಗಿದೆ. ಇನ್ನು, 2,42,676 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,63,01,482 ಕ್ಕೆ ಏರಿಕೆಯಾಗಿದೆ. ಇದೀಗ ದೇಶದಲ್ಲಿ 21,13,338 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 71,34,99,892 ಕೊರೊನಾ ಪರೀಕ್ಷೆಯನ್ನು ಮಾಡಲಾಗಿದೆ.


ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‌ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ ನಿನ್ನೆಯ ಕೋವಿಡ್ ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಇಂದು 9,550 ಕಡಿಮೆ ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯಗಳ ಪೈಕಿ ಮೊದಲ 5 ಸ್ಥಾನದಲ್ಲಿ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ ರಾಜ್ಯಗಳಿವೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles