ಉಡುಪಿ: ಪ್ರಸಕ್ತ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 8. ಹಾಗೂ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ಸೈಟ್ www.kannadasiri.karnataka.gov.in ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾವಿದರಿಗೆ ಸಹಾಯಧನ
Subscribe
Login
0 Comments