Monday, June 9, 2025

ಕುಕ್ಕೆ ದೇವಳದ ಮಾಜಿ ಪ್ರಧಾನ ಅರ್ಚಕ ಕೇಶವ ಜೋಗಿತ್ತಾಯ ಇನ್ನಿಲ್ಲ..!

ಸುಬ್ರಹ್ಮಣ್ಯ: ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಕೇಶವ ಜೋಗಿತ್ತಾಯ (88) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.
ಕೇಶವ ಜೋಗಿತ್ತಾಯ ಅವರು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ತನ್ನೀರುಪಂಥ ಬಂಗಾಲಾಯಿ ನಿವಾಸಿ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅರ್ಚಕರಾಗಿ, ಪ್ರಧಾನ ಅರ್ಚಕರಾಗಿ ಸುಮಾರು 50 ವರ್ಷ ಸೇವೆ ಸಲ್ಲಿಸಿದ್ದರು. ಜ್ಯೋತಿಷ್ಯ ಶಾಸ್ತ್ರದಲ್ಲಿ ಅಪಾರ ಅನುಭವ ಪಡೆದಿದ್ದ ಅವರು ಹಲವಾರು ದೇವಸ್ಥಾನಗಳ ನಿರ್ಮಾಣ ಸಂದರ್ಭದಲ್ಲಿ ಮಾರ್ಗದರ್ಶನ ನೀಡುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಒರ್ವ ಪುತ್ರಿಯನ್ನು ಅಗಲಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles