Sunday, June 8, 2025

ಕೋವಿಡ್‌ನಿಂದ ನೊಂದ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ಉಡುಪಿ: ನಗರದ ರೆಡ್ ಕ್ರಾಸ್ ಭವನದಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸಹಯೋಗದೊಂದಿಗೆ, ಕೋವಿಡ್‌ನಿಂದ ನೊಂದ ಬಡ ಫಲಾನುಭವಿಗಳಿಗೆ ರಾಜ್ಯ ಶಾಖೆಯಿಂದ ನೀಡಲ್ಪಟ್ಟ ದಿನಸಿ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ಸಾರ್ವಜನಿಕರು ರೆಡ್ ಕ್ರಾಸ್‌ನ ಅಂಗಸಂಸ್ಥೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ನೀಡುವ ಸೌಲಭ್ಯ ಹಾಗೂ ಕೃತಕ ಕಾಲು ನೀಡುವಿಕೆ, ತಜ್ಞರಾದ ಆಡಿಯೋಲಿಜಿಸ್ಟ್, ಸೈಕ್ಯಾಟ್ರಿಕ್ ಫಿಸಿಯೋಥೆರಪಿಸ್ಟ್ರವರ ಸೇವೆಯನ್ನು ಬಳಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಅವರು ಕೋವಿಡ್‌ನಿಂದ ಮೃತಪಟ್ಟರೆ, ಮೃತಪಟ್ಟವರ ಮನೆಯ ಸದಸ್ಯರು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಹೊಲಿಗೆ ಮೆಶಿನ್ ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಯುನಿಟ್ ಇನ್ ಚಾರ್ಜ್ ಜಯಶ್ರೀ, ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ, ಸ್ವಾಗತಿಸಿದರು, ಆಡಳಿತ ಮಂಡಳಿ ಸದಸ್ಯೆ ರಮಾದೇವಿ ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles