ನವದೆಹಲಿ: ಯುಎಇಗೆ ತೆರಳುವ ಭಾರತೀಯ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂಬ ನಿಯಮವನ್ನು ದುಬೈ ಸರ್ಕಾರವು ಮಂಗಳವಾರ ರದ್ದುಗೊಳಿಸಿದೆ.
ಭಾರತ, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂಬ ನಿಯಮವನ್ನು ರದ್ದುಗೊಳಿಸಲಾಗಿದೆ. ಹೊಸ ನಿಯಮದ ಅನುಸಾರ ಭಾರತೀಯ ಪ್ರಯಾಣಿಕರು ಯುಎಇಗೆ ಪ್ರಯಾಣಿಸುವ 48 ಗಂಟೆಗಳ ಮುನ್ನ ಕೊರೋನಾ ನೆಗೆಟಿವ್ ವರದಿ ನೀಡಬೇಕು. ಹಾಗೇ ದುಬೈಗೆ ಆಗಮಿಸಿದ ತಕ್ಷಣ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.