Sunday, June 8, 2025

ಕರಾವಳಿಯ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ..!

ಮಂಗಳೂರು: ಕರಾವಳಿಯ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಮಾಡಲಾಗುತ್ತಿದ್ದು, ಇದೀಗ ಮಂಗಳೂರಿನ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಇಲ್ಲ ಅವಕಾಶ ಇಲ್ಲ ಎನ್ನಲಾಗುತ್ತಿದೆ.

ಈ ಸಂಬಂಧ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಬ್ಯಾನರ್‌ಅನ್ನು ಅಳವಡಿಸಲಾಗಿದೆ. ಜಾತ್ರೋತ್ಸವ ದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಬ್ಯಾನರ್‌ನಲ್ಲಿದೆ.

ದೂರು ನೀಡಿದರೆ ಕ್ರಮ:

ಈ ಬಗ್ಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಬ್ಯಾನರ್ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡುತ್ತೇವೆ. ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles