Saturday, June 7, 2025

ನೌಕರರ ಭವಿಷ್ಯ ನಿಧಿ ಸಂಸ್ಥೆ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಫೆಬ್ರವರಿ 2 ರವರೆಗೆ ವಿಸ್ತರಣೆ

ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಸಿಹಿ ಸುದ್ದಿಯನ್ನು ನೀಡಿದ್ದು, ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಫೆಬ್ರವರಿ 2 ರವರೆಗೆ ವಿಸ್ತರಣೆ ಮಾಡಿದೆ.


ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಒಟ್ಟು 98 ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟಂಟ್ ಡೈರಕ್ಟರ್, ಆಡಿಟರ್, ಅಸಿಸ್ಟಂಟ್ ಆಡಿಟ್ ಆಫೀಸರ್ ಹುದ್ದೆಗಳು ಖಾಲಿಯಿದ್ದು, ಪದವೀಧರರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 8 2021ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈ ಮೊದಲು ಜನವರಿ 2 2022 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಂದು ಘೋಷಿಸಲಾಗಿತ್ತು. ಆದರೆ, ಇದೀಗ ಈ ಅವಧಿಯನ್ನು ಫೆಬ್ರವರಿ 2 ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಪ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ www.epfindia.gov.in ಗೆ ಭೇಟಿ ನೀಡಬಹುದಾಗಿದೆ.


ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 56 ವರ್ಷ ಮೀರಿರಬಾರದು. ಇಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದ ಯಾವುದೇ ಸ್ಥಳದಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಯ್ಕೆಯಾದವರಿಗೆ ಮಾಸಿಕ 15,600-39,100 ವೇತನ ನೀಡಲಾಗುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸೂಕ್ತ ದಾಖಲೆಗಳೊಂದಿಗೆ ಶ್ರೀ ಪರಿತೋಷ್ ಕುಮಾರ್ ರೀಜನಲ್ ಪ್ರಾವಿಡೆಂಟ್ ಫಂಡ್ ಕಮಿಷನರ್-1 ಭವಿಷ್ಯ ನಿಧಿ ಭವನ 14 ಭಿಕಜಿ ಕ್ಯಾಮ ಸರ್ಕಲ್ ನವದೆಹಲಿ-11006 ವಿಳಾಸಕ್ಕೆ ಕಳುಹಿಸಬೇಕು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles