Sunday, June 8, 2025

ಜನವರಿ 15 ರ ವರೆಗೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿವೇತನ ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆ ಹಾಗೂ ಕಾಲೇಜುಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು, ರಾಷ್ಟೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್.ಎಸ್.ಪಿ) ನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public ಸಂಪರ್ಕಿಸಬಹುದಾಗಿದೆ. ಹಾಗೂ ಉಡುಪಿ ದೂರವಾಣಿ ಸಂಖ್ಯೆ : 0820- 2574596, ಕುಂದಾಪುರ ದೂರವಾಣಿ ಸಂಖ್ಯೆ: 08254- 230370 ಹಾಗೂ ಕಾರ್ಕಳ ದೂರವಾಣಿ ಸಂಖ್ಯೆ : 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles