ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ, ಸಫಾಯಿ
ಕರ್ಮಚಾರಿ/ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ, ಬಿ.ಎ, ಬಿಕಾಂ, ಬಿಎಸ್ಸಿ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಡಿಪ್ಲೋಮಾ & ಇಂಜಿನಿಯರಿಂಗ್ ಓದುತ್ತಿರುವ ಮಕ್ಕಳಿಗೆ ಆನ್ಲೈನ್ ಪಾಠ ಕೇಳಲು, ಅವರ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್ಗಳ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಜನವರಿ 31 ರ ವರೆಗೆ ಟ್ಯಾಬ್ ವಿತರಣೆಯ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ.
ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.ksskdc.kar.nic.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 31 ರ ವರೆಗೆ ಟ್ಯಾಬ್ ವಿತರಣೆಯ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Subscribe
Login
0 Comments