Sunday, June 8, 2025

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ; ಪುತ್ರನ ಕೃತ್ಯ ಸಾಬೀತು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ವರ್ಷದ ಹಿಂದೆ ತಂದೆಯನ್ನು ಕೊಲೆಗೈದ ಮಗನನ್ನು ದೋಷಿ ಎಂದು ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2021ರ ಜ.18ರಂದು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಿವಾಸಿ ತಂದೆ ಶ್ರೀಧರ ಪೂಜಾರಿ(54)ಯನ್ನು ಮಗ ಹರೀಶ್ ಪೂಜಾರಿ(28) ಹತ್ಯೆ ಮಾಡಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿವರ: ಆರೋಪಿ ಹರೀಶ್‌ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದ್ದು, ಅವರಿಬ್ಬರ ಮದುವೆಗೆ ಮನೆಯವರು ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಹರೀಶ್‌ 2021ರ ಜ. ಯಲ್ಲಿ ತನ್ನ ಪ್ರೇಯಸಿಯೊಂದಿಗೆ ಮನೆ ಬಿಟ್ಟು ಹೋಗಿದ್ದ. 3 ವಾರದ ನಂತರ ಹಿಂತಿರುಗಿ ಬಂದ ಮಗನನ್ನು ಆತನ ಪ್ರೇಯಸಿಯೊಂದಿಗೆ ಮನೆಗೆ ಸೇರಿಸಲು ತಂದೆ ಒಪ್ಪಿರಲಿಲ್ಲ. ಈ ಹಿನ್ನೆಲೆ ತಂದೆ ಮಗನ ನಡುವೆ ಜಗಳವಾಗಿ ತಂದೆಗೆ ಕೊಲೆ ಬೆದರಿಕೆ ಹಾಕಿ ಹೋಗಿದ್ದ. ಬಳಿಕ ಅದೇ ದಿನ ಸಂಜೆ ತಂದೆಯನ್ನು ಕೊಲೆ ಮಾಡಿದ್ದಾನೆ.
ಕೊಲೆ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಆರ್‌. ಪಲ್ಲವಿ ಅವರು ಪೂರ್ಣಗೊಳಿಸಿದ್ದು, ಆರೋಪಿ ಹರೀಶ್‌ ಪೂಜಾರಿ ದೋಷಿ ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟ ಮಾಡಬೇಕಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles