ಇನ್ನಾ: ಇನ್ನಾ ಗ್ರಾ.ಪಂ., ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಾ ಉಮಾ ರಂಜನಿ ಹೆಲ್ತ್ ಕೇರ್(ಪ್ರೈ) ಲಿಮಿಟೆಡ್ ಪಡುಬಿದ್ರೆ ಲಯನ್ಸ್ ಕ್ಲಬ್ ಉಡುಪಿ ಚೇತನ ಇವರ ಆಶ್ರಯದಲ್ಲಿ ತಜ್ಞ ವೈದ್ಯರ ನೇತೃತ್ವದಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಗ್ರಾಮದ ಕೊರೋನಾ ವಾರಿಯರ್ಸ್‌ಗೆ ಗೌರವಾರ್ಪಣೆ ಕಾರ್ಯಕ್ರಮವು ಫೆ.27 ರಂದು ಬೆಳಿಗ್ಗೆ 10ಕ್ಕೆ ಇನ್ನಾ ಸ.ಹಿ.ಪ್ರಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಇನ್ನಾ ಗ್ರಾ.ಪಂ. ಅಧ್ಯಕ್ಷ ಕುಶ.ಆರ್.ಮೂಲ್ಯ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉದ್ಯಮಿ ಸತೀಶ್ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಅರುಣ್ ಶೆಟ್ಟಿ ಉಕ್ಕುಡ, ಉದ್ಯಮಿ ಶಶಿಕುಮಾರ್ ಶೆಟ್ಟಿ, ಭಾರ್ಗವ್ ಟ್ರಸ್ಟ್ ಅಧ್ಯಕ್ಷ ಪಿ.ರಾಮದಾಸ ಮಡ್ಮಾಣ್ಣಾಯ, ಇನ್ನಾ ಗ್ರಾ.ಪಂ. ಉಪಾಧ್ಯಕ್ಷೆ ಸರಿತಾ ಶೆಟ್ಟಿ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ಇನ್ನಾ ಎಂ.ವಿ. ಶಾಸ್ತ್ರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಡಾ.ಪ್ರಕಾಶ್ ರಾವ್ ಪಿ.ಎನ್, ಇನ್ನಾ ಸ.ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕ ಪಿ.ಎ.ರವೀಂದ್ರನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.