Sunday, June 8, 2025

ಫೆ.27: ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ

ವಕ್ವಾಡಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಹುಟ್ಟೂರ ಸನ್ಮಾನ ಸಮಿತಿ ವಕ್ವಾಡಿ ವತಿಯಿಂದ ಫೆ.27ರಂದು ವಕ್ವಾಡಿಯಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಅಧ್ಯಕ್ಷರಾದ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

ಫೆ.18ರಂದು ವಕ್ವಾಡಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ದುಬೈಗೆ ತೆರಳಿ ಉದ್ಯಮ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿದವರು. ಫೆ.27ರಂದು ಬೆಳಿಗ್ಗೆ 9 ಗಂಟೆಯಿಂದ ಉಡುಪಿ ಪ್ರಸಾದ್ ನೇತ್ರಾಲಯದ ತಜ್ಞ ವೈದ್ಯರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ, ಶಸ್ತ್ರಚಿಕಿತ್ಸೆ ಅಗತ್ಯವುಳ್ಳವರಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಅದೇ ಸಂದರ್ಭ ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಅಪರಾಹ್ನ 2 ಗಂಟೆಗೆ ಆಹ್ವಾನಿತ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದ್ದು ವಿಜೇತ ತಂಡಕ್ಕೆ ಫಲಕ, ನಗದು ಬಹುಮಾನ ನೀಡಲಾಗುತ್ತದೆ ಎಂದರು.

ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಕಾರ್ಯದರ್ಶಿ ವೇಣುಗೋಪಾಲ ಹೆಗ್ಡೆ ಮಾತನಾಡಿ, ಈಗಾಗಾಲೇ ಬೃಹತ್ ವೇದಿಕೆ ನಿರ್ಮಾಣದ ಕೆಲಸ ನಡೆಯುತ್ತಿದ್ದು, ಫೆ.27ರ ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದು, ಧಾರ್ಮಿಕ, ರಾಜಕೀಯ, ಗಣ್ಯರು, ಚಲನಚಿತ್ರ ನಟರು ಭಾಗವಹಿಸಲಿದ್ದಾರೆ. ರಾತ್ರಿ 8.30ಕ್ಕೆ ಆಳ್ವಾಸ್ ಪ್ರತಿಷ್ಠಾನ ಮೂಡಬಿದ್ರೆ ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಪ್ರಚಾರ ಸಮಿತಿ ಅಧ್ಯಕ್ಷ ಡಾ.ಸುಧಾಕರ ನಂಬಿಯಾರ್, ಆರ್ಥಿಕ ಸಮಿತಿಯ ಬಾಲಕೃಷ್ಣ ಶೆಟ್ಟಿ, ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಸತೀಶ್ ಪೂಜಾರಿ ವಕ್ವಾಡಿ ವಂದಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles