ಮೂಡುಬಿದಿರೆ: ಮಂಗಳೂರಿನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಫೆ.19ರಂದು ಗ್ರಾಮ ವಾಸ್ತವ್ಯವನ್ನು ಮಾಡಲಿದ್ದಾರೆಂದು ತಾಲೂಕು ದಂಡಾಧಿಕಾರಿ ಪುಟ್ಟರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಡುಬಿದರೆ ತಾಲೂಕಿನ ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಪೂಪಾಡಿಕಲ್ಲು ಮತ್ತು ಕಡಂದಲೆ ಗ್ರಾಮದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಜಿಲ್ಲಾಧಿಕಾರಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.